ದೊಡ್ಡಬಳ್ಳಾಪುರ: ನಗರಸಭೆಗೆ ಅ.26 ರಂದು ನಡೆಯುವ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆಯೊಂದಿಗೆ ಆಡಳಿತ ನಡೆಸುವಂತೆ ಜೆಡಿಎಸ್ ಪಕ್ಷದ ವರಿಷ್ಟರು ಸೂಚನೆ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
31 ಜನ ಸದಸ್ಯರನ್ನು ಹೊಂದಿರುವ ನಗರಸಭೆಯಲ್ಲಿ ಯಾವುದೇ ಪಕ್ಷಕ್ಕು ಸ್ಪಷ್ಟ ಬಹುಮತ ಬರದೆ ಅತಂತ್ರವಾಗಿತ್ತು. ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 7 ಹಾಗೂ 3 ಜನ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು. ಹೊಂದಾಣಿಕೆ ಕುರಿತಂತೆ ಇದ್ದ ಎಲ್ಲಾ ಗಾಳಿಸುದ್ದಿಗಳಿಗೆ ತೆರೆಬಿದ್ದಿದೆ.
ಬಿಜೆಪಿ ಪೂರ್ಣ ಎರಡುವರೆ ವರ್ಷ ಅಧ್ಯಕ್ಷ ಸ್ಥಾನಕ್ಕೆ 9 ವಾರ್ಡ್ ಸಂಜಯನಗರದ ಎಸ್.ಸುಧಾರಾಣಿ ಕೋಂ ಲಕ್ಷ್ಮೀನಾರಾಯಣ್ ಅಂತಿಮಗೊಳಿಸಿದ್ದು, ಜೆಡಿಎಸ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಚರ್ಚೆ ಏರ್ಪಟ್ಟಿದ್ದು, ಅಂತಿಮವಾಗಿ 25ನೇ ವಾರ್ಡ್ ಮಾರುತಿನಗರದ ಆದಿಲಕ್ಷ್ಮೀ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಇಂದು ಆಯ್ಕೆ ಪ್ರಕ್ರಿಯೆ ನಡೆಯಲ್ಲಿದೆ. ಜೆಡಿಎಸ್, ಬಿಜೆಪಿ ಬೇರೆ ಬೇರೆಯಾಗಿ ನಾಮಪತ್ರ ಸಲ್ಲಿಸಲಿದ್ದಾರೆನ್ನಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….