ಬೆಂ.ಗ್ರಾ.ಜಿಲ್ಲೆ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನದಂದು ಪ್ರಧಾನಮಂತ್ರಿಯವರಿಂದ ವಿವಿಧ ಕಾರ್ಯಕ್ರಮಗಳ ಘೋಷಣೆ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಆದೇಶದ ಮೇರೆಗೆ ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿ ವತಿಯಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕುಗಳ ಮುಂದಾಳತ್ವದಲ್ಲಿ ಎರಡು ಜಿಲ್ಲೆಯ ಎಲ್ಲಾ ಬ್ಯಾಂಕುಗಳ ಸಹಯೋಗದೊಂದಿಗೆ ಗ್ರಾಹಕರಿಗೆ “ಸಾಲ ಸಂಪರ್ಕ (ಕ್ರೆಡಿಟ್ ಔಟ್ ರೀಚ್) ಕಾರ್ಯಕ್ರಮ”ವನ್ನು 2021ರ ಅಕ್ಟೋಬರ್ 27 ರಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ “ಜ್ಞಾನಜ್ಯೋತಿ ಸಭಾಂಗಣ” ದಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಡಿಸಿಸಿಬಿ, ನಬಾರ್ಡ್, ಕೆವಿಐಸಿ, ಕೆವಿಐಬಿ, ಡಿಐಸಿ, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಇಲಾಖೆ ಹಾಗೂ ಇತರೆ ಸರ್ಕಾರಿ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.
ಬ್ಯಾಂಕುಗಳಲ್ಲಿ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಕುರಿತು ಗ್ರಾಹಕರಲ್ಲಿ ವಿಸ್ತೃತ ಅರಿವು ಮೂಡಿಸಲು, ಸಾಲದ ಅರ್ಜಿಗಳನ್ನು ಸ್ವೀಕರಿಸಲು, ಸಾಲ ಮಂಜೂರಾತಿ ಮತ್ತು ಸಂಭಾವ್ಯ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸುವ ಸಲುವಾಗಿ ಈ ಸಾಲ ಸಂಪರ್ಕ(ಕ್ರೆಡಿಟ್ ಔಟ್ ರೀಚ್) ಸಭೆಯನ್ನು ಏರ್ಪಡಿಸಲಾಗಿದೆ.
ಸಾಲ ಸಂಪರ್ಕ(ಕ್ರೆಡಿಟ್ ಔಟ್ ರೀಚ್) ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆತ್ಮ ನಿರ್ಭರ ಯೋಜನೆಗಳಡಿಯಲ್ಲಿ ಬರುವ ಪಿಎಂ ಸ್ವಾನಿಧಿ, ಜಿ.ಇ.ಸಿ.ಎಲ್., ಕೃಷಿ ಮೂಲಸೌಕರ್ಯ ನಿಧಿ ಯೋಜನೆ(ಎಐಎಪ್), ಪಶು ಸಂಗೋಪನಾ ಮೂಲಸೌಕರ್ಯ ನಿಧಿ ಯೋಜನೆ(ಎಎಚ್ಐಡಿಎಫ್) ಮತ್ತು ಪಿಎಂಎಂವೈ(ಮುದ್ರಾ) ಸ್ಟ್ಯಾಂಡ್ ಅಪ್ ಇಂಡಿಯ, ಪಿಎಂಇಜಿಪಿ, ಕೃಷಿ ಮತ್ತು ಕೃಷಿಯೇತರ, ಎ,ಎಸ್ಎಂಇ, ರಿಟೈಲ್, ಶಿಕ್ಷಣ ಮತ್ತು ವಸತಿ ಸಾಲಗಳಲ್ಲದೆ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ಈ ವಿಶೇಷ ಜಾಗೃತಿ ಅಭಿಯಾನವನ್ನು ನಡೆಸಲು ಎಲ್ಲಾ ಬ್ಯಾಂಕುಗಳಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುವುದು. ಗ್ರಾಹಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಮತ್ತು ಬ್ಯಾಂಕುಗಳ ವಿವಿಧ ಯೊಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……