ದೊಡ್ಡಬಳ್ಳಾಪುರ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಯುವನೋರ್ವನನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಪರ ಸಂದೇಶ ಹಾಕಿದ್ದ ದೂರಿನ ಹಿನ್ನೆಲೆಯಲ್ಲಿ 22 ವರ್ಷದ ಇಮ್ರಾನ್ ಎನ್ನುವವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವೈರಲ್ ಆಡಿಯೋ: ಬಂಧಿತ ಇಮ್ರಾನ್ ಹಾಗೂ ನೆಲಮಂಗಲ ತಾಲೂಕಿನ ಯುವಕನೋರ್ವನ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದೇಶ ವಿರೋಧಿ ಹೇಳಿಕೆಗಳ ಪೊಸ್ಟ್ ಮಾಡಿದ್ದ ಕುರಿತಂತೆ ಸಂಭಾಷಣೆ ನಡೆದಿತ್ತು.
ಈ ಸಂಭಾಷಣೆಯಲ್ಲಿ ಪರ ವಿರೋಧ ಚರ್ಚೆ ನಡೆದಿದ್ದು, ಯುವಕನ ದೇಶ ವಿರೋಧಿ ನಿಲುವಿನ ಕುರಿತಂತೆ ಹಿಂದುಪರ ಸಂಘಟನೆಯ ಸದಸ್ಯರು ನಗರ ಠಾಣೆಯಲ್ಲಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆರೋಪಿ ಇಮ್ರಾನ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವವರ ಮೇಲೆ ಹದ್ದಿನಗಣ್ಣಿಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……