ದೊಡ್ಡಬಳ್ಳಾಪುರ: ತಾಲ್ಲೂಕಿನ ಅರ್ಕಾವತಿ ನದಿ ಪಾತ್ರದಲ್ಲಿನ ಪ್ರಮುಖ ಕೆರೆಯಾಗಿರುವ ಮೆಳೆಕೋಟೆ ಕೆರೆ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಂ.ವೀರಪ್ಪಮೊಯಿಲಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.
ಇದೇ ಸಂದರ್ಭದಲ್ಲಿ ಮೆಳೆಕೋಟೆ ಗ್ರಾಮದ ಮಹಿಳೆಯರು ಹೂವಿನ ಆರತಿಗಳೊಂದಿಗೆ ಕೆರೆಯವರೆಗೂ ಮೆರವಣಿಗೆಯಲ್ಲಿ ಬಂದು ಪೂಜೆ ಸಲ್ಲಿಸಿದರು.
ಬಾಗಿನ ಸಮರ್ಪಣೆ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಎಂ.ವೀರಪ್ಪಮೊಯಿಲಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಶುದ್ದೀಕರಿಸಿದ ನೀರನ್ನು ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ತಾಲ್ಲೂಕಿನ ಕೆರೆಗಳಿಗೆ ತುಂಬಿಸುವ ಯೋಜನೆ ಪ್ರಾರಂಭವಾಗಿದ್ದು ರೈತರಿಗೆ ವರದಾನವಾಗಿದೆ.
ಎತ್ತಿನಹೊಳೆ ಯೋಜನೆಯ ನೀರು ಹರಿಯಲು ಪ್ರಾರಂಭವಾದರೆ ಈ ಭಾಗದ ನೀರಿನ ಬವಣೆ ನೀಗದಲಿದೆ. ಅಂತರ್ಜಲ ಹೆಚ್ಚಳದಿಂದ ರೈತರು ಬದುಕು ಹಸನಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….