ದೊಡ್ಡಬಳ್ಳಾಪುರ: ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಸುಧಾರಾಣಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಫರ್ಹಾನಾ ತಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ನಗರಸಭೆಯ ಅಧ್ಯಕ್ಷೆ / ಉಪಾಧ್ಯಕ್ಷೆ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಎಸ್.ಸುಧಾರಾಣಿ ಹಾಗೂ ಫರ್ಹಾನಾ ತಾಜ್ ಅವರನ್ನು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಅಭಿನಂದನೆ ಅಲ್ಲಿಸಿದರು.
ಈ ವೇಳೆ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ನಗರಸಭೆ ಸದಸ್ಯರಾದ ಪ್ರಭುದೇವ್, ಮಲ್ಲೇಶ್, ಅಧಿಲಕ್ಷ್ಮಿ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಕುಂಟನಹಳ್ಳಿ ಮಂಜುನಾಥ್, ಚಂದ್ರಶೇಖರ್ ರಾ.ಬೈರೇಗೌಡ, ನಾಗರಾಜು,ನಾರಾಯಣಪ್ಪ, ದಸಗೊಂಡಲ್ಲಿ ಚಂದ್ರಪ್ಪ, ಹರ್ಷ, ಆನಂದ್, ರಿಯಾಜ್, ಬಿಜೆಪಿಯ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……