ಬೆಂಗಳೂರು: ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.
ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. ಭಾರಿ ಸಂಖ್ಯೆಯ ಪೊಲೀಸರನ್ನು ನಿವಾಸದ ಸುತ್ತ ನಿಯೋಜಿಸಲಾಗಿದೆ.
ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಇನ್ನು ನಟ ಪುನೀತ್ ರಾಜ್‍ಕುಮಾರ್ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ತೆಲುಗು ಚಿತ್ರರಂಗದ ಖ್ಯಾತ ನಟ ಬಾಲಕೃಷ್ಣ ಆದಿಯಾಗಿ ಅನೇಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……