ಮೇಷ: ಈ ರಾಶಿಯವರಿಗೆ ಹಲವು ಅಡೆತಡೆಗಳಿದ್ದರೂ ಕಾರ್ಯಸಾಧನೆಗೆ ತೊಂದರೆಯಾಗದು. ಮಿತ್ರರ ಸಹಕಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಫಲ ಸಿಗುವುದು. ಆದರೆ ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಗಮನವಾಗಲಿದ್ದು, ತಾಳ್ಮೆಯಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ.
ವೃಷಭ: ಈ ರಾಶಿಯವರು ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗುವುದು.
ಮಿಥುನ: ಈ ರಾಶಿಯವರು ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.
ಕಟಕ: ಈ ರಾಶಿಯವರು ವೃತ್ತಿರಂಗದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವ ಸಾಧ್ಯತೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ. ಮಾನಸಿಕ ಚಿಂತೆಗಳು ಕಾಡಬಹುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ.
ಸಿಂಹ: ಈ ರಾಶಿಯವರು ಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕು. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.
ಕನ್ಯಾ: ಈ ರಾಶಿಯವರಿಗೆ ಹಿತ ಶತ್ರುಗಳ ಕಾಟದಿಂದ ಪಾಲಿಗೆ ಬಂದ ಅವಕಾಶಗಳು ಕೈ ತಪ್ಪಿ ಹೋಗುತ್ತಿದೆ. ಆದರೆ ನಿರಾಸೆ ಬೇಡ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆದರೆ ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ನೆಮ್ಮದಿ ನೀಡುವುದು. ದೇವತಾ ಪ್ರಾರ್ಥನೆ ಮಾಡಿ.
ತುಲಾ: ಈ ರಾಶಿಯವರಿಗೆ ದೂರ ಸಂಚಾರದಲ್ಲಿ ಅಪಘಾತಗಳಾಗದಂತೆ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸುತ್ತಾರೆ.
ವೃಶ್ಚಿಕ: ಈ ರಾಶಿಯವರು ಅಂದುಕೊಂಡ ಯೋಜನೆಗಳನ್ನು ಪೂರ್ತಿ ಮಾಡಲು ಇದು ಸಕಾಲ. ವಾಹನ ಖರೀದಿ ಯೋಗವಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿದೆ.
ಧನಸ್ಸು: ಈ ರಾಶಿಯವರು ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ನಾನಾ ತೊಡಕುಗಳು ಬರಬಹುದು. ತಾಳ್ಮೆಯಿಂದ ಎದುರಿಸಬೇಕು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ದೇವಾಲಯ ಸಂದರ್ಶಿಸುವ ಸಾಧ್ಯತೆ.
ಮಕರ: ಈ ರಾಶಿಯವರು ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಲೆಕ್ಕ ತಪ್ಪಿದರೆ ತೊಂದರೆ ತಪ್ಪಿದ್ದಲ್ಲ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲು ಓಡಾಟ ನಡೆಸಬೇಕಾಗುತ್ತದೆ.
ಕುಂಭ: ಈ ರಾಶಿಯವರಿಗೆ ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಾರೆ. ಆರೋಗ್ಯದ ಬಗ್ಗೆ ಅಗತ್ಯ.
ಮೀನ: ಈ ರಾಶಿಯ ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕಿಳಿಸಲು ಇದು ಸಕಾಲ. ಹಣಕಾಸಿನ ವಿಚಾರವಾಗಿ ಚಿಂತೆಗಳು ದೂರವಾಗುವುದು. ಬಾಕಿ ಹಣ ಸಂದಾಯವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವ ಸಾಧ್ಯತೆ.
ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ
ಆಯನ: ದಕ್ಷಿಣಾಯನ
ಋತು: ಶರದ್ ಋತು
ಮಾಸ: ಆಶ್ವಯುಜ ಮಾಸ
ಪಕ್ಷ: ಕೃಷ್ಣ ಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಪುಬ್ಬಾ ನಕ್ಷತ್ರ
ರಾಹುಕಾಲ: 07:43 ರಿಂದ 09:11
ಗುಳಿಕಕಾಲ: 01:34 ರಿಂದ 03:02
ಯಮಗಂಡಕಾಲ: 10:39 ರಿಂದ 12:07
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……