ದೊಡ್ಡಬಳ್ಳಾಪುರ: ತಾಲೂಕಿನ ಶಿವಪುರ (ವಡ್ಡನಹಳ್ಳಿ)ಯಲ್ಲಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ಥಳಿ ಅನಾವರಣವನ್ನು ತುಮಕೂರಿನ ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ನೆರವೇರಿಸಿದರು.
ಈ ವೇಳೆ ಮಾತನಾಡಿ ಅವರು, ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಕುರಿತು ಮಾತನಾಡುವುದು ಸೂರ್ಯನ ವರ್ಣನೆ ಮಾಡಿದಂತೆ. ಹಾಗೇ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಕುರಿತು ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ. ಗ್ರಾಮದಲ್ಲಿ ಪುತ್ಥಳಿ ಸ್ಥಾಪಿಸುವ ಪವಿತ್ರ ಕಾರ್ಯವನ್ನು ಗ್ರಾಮಸ್ಥರು ಮಾಡಿರುವುದು ಪ್ರಶಂಸನೀಯ ಕಾರ್ಯವೆಂದರು.
ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ಸಂಸ್ಥಾಪಕರಾದ ಬಿ.ಜಿ.ಜ್ಯೋತಿಪ್ರಕಾಶ್ ಮಿರ್ಜಿ ಮಾತನಾಡಿ, ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣ ಒಂದು ದಿನಕ್ಕೆ ಸೀಮಿತವಾಗದೆ, ಅದರ ಉದ್ದೇಶವನ್ನು ಅರಿತು ನಡೆಯಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಂಚುಗಲ್ ಬಂಡೆಮಠದ ಅಧ್ಯಕ್ಷರಾದ ಬಸವಲಿಂಗ ಸ್ವಾಮಿಗಳು, ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ಅಧ್ಯಕ್ಷರಾದ ಹೆಚ್.ಆರ್.ಮೋಹನ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಒಕ್ಕೂಟದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಆರೂಢಿ ಗ್ರಾಮಪಂಚಾಯಿತಿ ಚುನಾಯಿತ ಸದಸ್ಯರು ಸೇರಿದಂತೆ, ಶ್ರೀ ವೀರಶೈವ ಗೆಳೆಯರ ಬಳಗ ಸಂಘದ ಪದಾಧಿಕಾರಿಗಳು ಹಾಗೂ ಶಿವಪುರ (ವಡ್ಡನಹಳ್ಳಿ) ಗ್ರಾಮಸ್ಥರು ಸೇರಿದಂತೆ ಹಲವರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……