ದೊಡ್ಡಬಳ್ಳಾಪುರ: ನಗರದ ರೈಲ್ವೇ ನಿಲ್ದಾಣದ ಸಮೀಪ ಬೆಸೆಂಟ್ ಪಾರ್ಕ್ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಶಿರಡಿ ಸಾಯಿಬಾಬಾ ಸೇವಾ ಟ್ರಸ್ಟ್ ನೇತೃತ್ವದಲ್ಲಿ 9ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ನಡೆದ ಕಾಕಡಾರತಿ, ಪನ್ನೀರು ಅಭಿಷೇಕದಲ್ಲಿ ಭಕ್ತಾದಿಗಳು ಸಹ ಪನ್ನೀರು ಅಭಿಷೇಕ ನೆರವೇರಿಸಿದರು. ನಂತರ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ ವಿಶೇಷ ಪೂಜೆ ಹಾಗೂ ಭಜನೆ ಆರತಿ ದೂಪ ಪೂಜಾ ಕಾರ್ಯಕ್ರಮಗಳು ನಡೆದವು.
ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ಸಾಯಿ ಭಜನಾ ಮಂಡಲಿಯಿಂದ ಭಜನೆಗಳು ನಡೆದವು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……