ದೊಡ್ಡಬಳ್ಳಾಪುರ: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯ/ ಸಂಸ್ಥೆಗಳಲ್ಲಿ ಗೋವುಗಳನ್ನು ಪೂಜಿಸಲಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಗೋ ಪೂಜಾ ಕಾರ್ಯಕ್ರಮ ನ.5ರಂದು ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.) ಭಾಗವಹಿಸಲಿದ್ದಾರೆ.
ನವೆಂಬರ್ 05ರಂದು ಸಂಜೆ 5.30 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು, ನಂತರ ಗೋ ಪೂಜಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.
ನಂತರ ಸಂಜೆ 6.30ಗಂಟೆಗೆ ಘಾಟಿ ಸುಬ್ರಹ್ಮಣ್ಯ ದೇವಾಲಯದಿಂದ ರಸ್ತೆ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……