ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಸೇರಿದಂತೆ ಎಲ್ಲಾ ಶಾಲೆ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ನವೆಂಬರ್ 8ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸಲು ಸೂಚಿಸಲಾಗಿದ್ದು, ಅಂದಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳಾದ ಯುಕೆಜಿ ಮತ್ತು ಎಲ್ ಕೆಜಿ ಶಾಲೆಗಳನ್ನು ತೆರೆಯಲು ಸರ್ಕಾರ ಸೂಚನೆ ನೀಡಿದೆ.
ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ತೆರೆಯಬೇಕು. ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವೆರೆಗೆ ತರಗತಿ ನಡೆಸಲು ಸೂಚಿಸಿದೆ.
ಈ ಆದೇಶ ಕೋವಿಡ್ 19 ಸೋಂಕಿನ ಪ್ರಮಾಣ 2%ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಇದು ಅನ್ವಯವಾಗುತ್ತದೆ.
ಪೂರ್ವ ಪ್ರಾಥಮಿಕ ಮಕ್ಕಳಿಗೆ ಮನೆಯಿಂದಲೇ ಉಪಹಾರ ಮತ್ತು ಕುಡಿಯುವ ನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……