ದೊಡ್ಡಬಳ್ಳಾಪುರ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬಟ್ಟೆ ಹೊಲಿಯುವ ಟೈಲರ್ ಅಂಗಡಿಗೆ ಹಾನಿಯಾಗಿರುವ ಘಟನೆ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ವಿನಾಯಕ ನಗರದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ವಿನಾಯಕ ನಗರದ ವೇಣುಗೋಪಾಲ್ ಎನ್ನುವವರಿಗೆ ಸೇರಿದ ಟೈಲರ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ಹೊಲಿದು ಸಿದ್ದವಾಗಿದ್ದ, ಹೊಲಿಯಲು ಪಡೆದಿದ್ದ ಅಪಾರ ಪ್ರಮಾಣದ ಬಟ್ಟೆಗಳು ಶಾರ್ಟ್ ಸರ್ಕ್ಯೂಟ್ ನಿಂದ ತಗುಲಿದ ಬೆಂಕಿಗೆ ಸುಟ್ಟು ಭಸ್ಮವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……