Site icon ಹರಿತಲೇಖನಿ

ದೀಪಾವಳಿಗೆ ಮಳೆಯ ಅಬ್ಬರ: ರಾಜ್ಯಾದ್ಯಂತ ಇನ್ನೂ 03 ದಿನ ಮಳೆಯ ಆರ್ಭಟ…!

Channel Gowda
Hukukudi trust

ಬೆಂಗಳೂರು: ಕಳೆದ ಒಂದು ವಾರದಿಂದ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ತೀವ್ರ ಮಳೆಯಾಗುತ್ತಿದೆ. ಶುಕ್ರವಾರ, ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಿದ್ದು, ದೀಪಾವಳಿ ಹಬ್ಬದ ಪಟಾಕಿ ಹಚ್ಚುವ ಮಕ್ಕಳ ಕನಸಿಗೆ ನಿರಾಸೆ ತಂದಿದೆ‌

Aravind, BLN Swamy, Lingapura

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಗರದ ವಿವಿಧ ಭಾಗಗಳು ಸಂಪೂರ್ಣ ಜಲಾವೃತಗೊಂಡಿದ್ದವು. ರಸ್ತೆಗಳಲ್ಲಿ ಒಂದು ಅಡಿಗಿಂತಲೂ ಹೆಚ್ಚು ನೀರು ಹರಿದು, ವಾಹನ ಸಂಚಾರವೂ ಅಸ್ಥವ್ಯವಸ್ಥವಾಗಿದ್ದಲ್ಲದೆ, ಮಳೆ ನೀರು ಕಸವನ್ನೂ ರಸ್ತೆಗೆ ತಂದು ಹಾಕಿದೆ.

ದೊಡ್ಡಬಳ್ಳಾಪುರ ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದ್ದು, ಸಂಜೆಯ ನಂತರ ಸುರಿದ ಮಳೆಯನ್ನೇ ಕಾರಣ ಮಕ್ಕಳು ಪಟಾಕಿ ಒಡೆಯಲು ಸಾಧ್ಯವಾಗಲಿಲ್ಲ.

Aravind, BLN Swamy, Lingapura

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗಿದೆ.

ಮಳೆಯ ಅಬ್ಬರ ಇನ್ನೂ ನಾಲ್ಕು ದಿನ ಮುಂದುವರೆಯಲಿದ್ದು, ನವೆಂಬರ್ 9 ರವೆರೆಗೂ ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಬೀದರ್‌, ಬಾಗಲಕೋಟೆ, ಹಾವೇರಿ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಹವಾಮಾನ ಇಲಾಖೆ ಹೇಳಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version