ದೊಡ್ಡಬಳ್ಳಾಪುರ: ಟಿ.20 ವಿಶ್ವಕಪ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು, ತಾಲೂಕಿನ ತೂಬಗೆರೆ ಹಾಗೂ ಕಾರನಾಳಕ್ಕೆ ಸೇರಿದ ಐದು ಮಂದಿಯನ್ನು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ.
ಬಂಧಿತರು ತಾಲೂಕಿನ ತೂಬಗೆರೆಯ ಚಿಕನ್ ಸೆಂಟರ್ ಒಂದರಲ್ಲಿ ನ್ಯೂಜಿಲೆಂಡ್ ಮತ್ತು ನಮೀಬಿಯಾ ನಡುವೆ ಟಿ20 ಪಂದ್ಯದ ನಡೆಯುತಿತ್ತ ವೇಳೆ ಆನ್ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ್ದರು ಎನ್ನಲಾಗಿದೆ.
ಆನ್ಲೈನ್ ಆಪ್ ಡೌನ್‌ಲೋಡ್ ಮಾಡಿಕೊಂಡು, ಆನ್ಲೈನ್ ಮುಲಕ ಬೆಟ್ಟಿಂಗ್ ನಲ್ಲಿ ತೊಡಗಿದ್ದು, ಖಚಿತ ಮಾಹಿತಿಯ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ತೂಬಗೆರೆ ಹಾಗೂ ಕಾರನಾಳಕ್ಕೆ ಸೇರಿದ ಮನ್ಸೂರು, ಅಮ್ಜದ್, ಶಂಕರ್, ಹರೀಶ್, ಸತೀಶ್ ಎಂಬ ಐದು ಮಂದಿಯನ್ನು ಬಂಧಿಸಿದ್ದು, ಇವರಿಂದ 7 ಸಾವಿರ ರೂ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……