Site icon Harithalekhani

ದೊಡ್ಡಬಳ್ಳಾಪುರ: ಇಂದು (ನ.8) ಅಂಗನವಾಡಿ ಕೇಂದ್ರಗಳ ಪುನರ್ ಪ್ರಾರಂಭೋತ್ಸವಕ್ಕೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಎನ್.ನಾಗರಾಜ್(ಎಂ.ಟಿ.ಬಿ) ಚಾಲನೆ

ದೊಡ್ಡಬಳ್ಳಾಪುರ: ಕೋವಿಡ್-19ರ ಪಾಸಿಟಿವಿಟಿ ದರ ಶೇ.2ರಷ್ಟು ಕಡಿಮೆ ಇರುವುದರಿಂದ ಹಾಗೂ ರಾಜ್ಯ ಮಟ್ಟದ ತಜ್ಞರ ಸಮಿತಿಯು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಅಂಗನವಾಡಿ ಕೇಂದ್ರಗಳನ್ನು ತೆರೆಯಲು ತಿಳಿಸಿರುವ ಹಿನ್ನೆಲೆ, 2021ರ ನವೆಂಬರ್ 08ರಂದು ತಾಲೂಕಿನ ಆದಿನಾರಾಯಣ ಹೊಸಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳನ್ನು ಪುನಃ ಕೇಂದ್ರಕ್ಕೆ ಆಹ್ವಾನಿಸುವ ಮುಖಾಂತರ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಪುನರ್ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್, ಪೌರಾಡಳಿತ, ಸಣ್ಣ ಕೈಗಾರಿಕೆ, ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜ್(ಎಂ.ಟಿ.ಬಿ) ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಶಾಸಕ ವೆಂಕಟರಮಣಯ್ಯ, ತಹಶಿಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ಸ್ಥಳೀಯ ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಅನಿತಾಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಖಿ ಕಟ್ಟಡ ಉದ್ಘಾಟನೆ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ “ಸಖಿ” ಒನ್ ಸ್ಟಾಪ್ ಸೆಂಟರ್ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ  ಆವರಣದಲ್ಲಿ 2021ರ ನವೆಂಬರ್ 08 ರಂದು ಮಧ್ಯಾಹ್ನ 3.30 ಗಂಟೆಗೆ ಏರ್ಪಡಿಸಲಾಗಿದೆ.

ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವಎನ್.ನಾಗರಾಜ್(ಎಂ.ಟಿ.ಬಿ) ಅವರು “ಸಖಿ” ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅವರ ಘನ ಉಪಸ್ಥಿತಿಯಲ್ಲಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 

ಸಮಾರಂಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿ ವಿಧಾನ‌ಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.‌ಎನ್., ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‌ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ತಿನ ಸದಸ್ಯರಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಾ ಮಹಾದೇವನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ‌ಪಿ.ಹೇಮಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಪ್ರಿಯಾಂಕ ಮೇರಿ ಪ್ರಾನ್ಸಿಸ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ದಿಬ್ಬೂರು ಜಯಣ್ಣ, ಕೆ.ಎಮ್.ಎಫ್ ಹಾಗೂ ಬಮೂಲ್ ನಿರ್ದೇಶಕರಾದ ಬಿ.ಸಿ‌.ಆನಂದ್‌ ಕುಮಾರ್, ದೊಡ್ಡಬಳ್ಳಾಪುರದ ಎ.ಪಿ.ಎಂ.ಸಿ. ಅಧ್ಯಕ್ಷರು ಹಾಗೂ ಕರ್ನಾಟಕ ಕೃಷಿ ಮಂಡಳಿಯ ಸದಸ್ಯರಾದ ಎನ್.ವಿಶ್ವನಾಥರೆಡ್ಡಿ, ದೊಡ್ಡಬಳ್ಳಾಪುರ ಟಿ.ಎ.ಪಿ.ಎಂ.ಸಿ.ಎಸ್. ನ ಅಧ್ಯಕ್ಷರಾದ ಸಿದ್ದರಾಮಯ್ಯ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಧಾರಾಣಿ‌ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷರಾದ ಫರ್ಹಾನ್ ತಾಜ್ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಿ.ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಟರಾಜ್ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version