ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರುಗಳು ಅಧಿಕಾರ ಪದವಿಯ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಕರ್ನಾಟಕ ಉಚ್ಛ ನಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಕರ್ನಾಟಕದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……