Site icon Harithalekhani

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡುವುದಾಗಿ ಬೆದರಿಕೆ, ತನಿಖೆ ಆರಂಭ

ಲಖನೌ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬ ಬರೆದುಕೊಂಡಿದ್ದಾನೆ.ಈ ಕುರಿತಂತೆ ವ್ಯಕ್ತಿಯ ಮೇಲೆ ತನಿಖೆ ಆರಂಭಿಸಲಾಗಿದೆ.

ಈ ಬಗ್ಗೆ ಟ್ವಿಟರ್‌ ಬಳಕೆದಾರರೊಬ್ಬರು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರಮೋದ್ ಕುಮಾರ್ ತಿವಾರಿ, ಟ್ವಿಟರ್‌ನಲ್ಲಿ ಪ್ರಧಾನಿ ಮತ್ತು ಮುಖ್ಯಮಂತ್ರಿಯವರಿಗೆ ಬೆದರಿಕೆ ಹಾಕಿರುವ ಬಗ್ಗೆ ನಮ್ಮ ಸಹಾಯವಾಣಿಗೆ ಅಪರಿಚಿತರು ಕರೆ ಮಾಡಿ ಹೇಳಿದ್ದಾರೆ.ಆಗ ವಿಷಯ ತಿಳಿದು ಬಂದಿದೆ ಎಂದಿದ್ದಾರೆ.

ಇದು ಕಿಡಿಗೇಡಿಗಳ ಕೃತ್ಯ. ಬೇರೆ ಹೆಸರು ನೀಡಿ ಖಾತೆ ತೆರೆಯಲಾಗಿದೆ. ಆದರೆ ಇದಾಗಲೇ ತನಿಖೆ ಶುರು ಮಾಡಿದ್ದೇವೆ. ಟ್ವಿಟರ್‌ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆ ಬಳಕೆದಾರ ಯಾರು ಎಂದು ಕಂಡುಹಿಡಿದು ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ತಿವಾರಿ ಮಾಹಿತಿ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version