ಬೆಂಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಗೆ ದ್ವೈವಾರ್ಷಿಕ ಚುನಾವಣೆ-2022ರ ಸಂಬಂಧ ಗ್ರಾಮ ಪಂಚಾಯಿತಿವಾರು/ ನಗರ ಸ್ಥಳೀಯ ಸಂಸ್ಥೆವಾರು ಮತದಾರರ ಕರಡು ಪಟ್ಟಿಯನ್ನು 2021ರ ನವೆಂಬರ್ 11ರಂದು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳು, ತಾಲ್ಲೂಕು ಕಚೇರಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಾರ್ಯಾಲಯಗಳಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ.
ಮತದಾರರು ಈ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು, ತಮ್ಮ ವಿವರಗಳು ಸರಿಯಾಗಿರುವುದನ್ನು ಖಚಿತಪಡಿಕೊಳ್ಳಲು ಹಾಗೂ ಲೋಪದೋಷಗಳಿದ್ದಲ್ಲಿ, ತಿದ್ದುಪಡಿ ಕೋರಿ ಅರ್ಜಿಯನ್ನು 2021ರ ನವೆಂಬರ್ 17ರೊಳಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಗಳಿಗೆ ಸಲ್ಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…