Site icon ಹರಿತಲೇಖನಿ

ದಿನ ಭವಿಷ್ಯ: ಭಾನುವಾರ, ನವೆಂಬರ್ 14, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾಗುವ ಸಾಧ್ಯತೆ

Channel Gowda
Hukukudi trust

ಮೇಷ: ಈ ರಾಶಿಯವರು ಮನಸ್ಸು ಬಯಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿ ಕಾಣಲಿದ್ದಾರೆ. ಉದ್ಯೋಗ ಬದಲಾವಣೆ ಪ್ರಯತ್ನಕ್ಕೆ ತಕ್ಕ ಮಟ್ಟಿಗಿನ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

Aravind, BLN Swamy, Lingapura

ವೃಷಭ: ಈ ರಾಶಿಯವರು ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹೊಸ ಹೊಣೆಗಾರಿಕೆಗಳಿಗೆ ಸಿದ್ಧರಾಗಿ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದ್ದು, ಸಂಗಾತಿಯ ಪ್ರೀತಿ ಸಿಗಲಿದೆ. ತಾಳ್ಮೆ, ಸಂಯಮವಿರಲಿ.

ಮಿಥುನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

Aravind, BLN Swamy, Lingapura

ಕಟಕ: ಈ ರಾಶಿಯವರು ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾದೀತು. ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ. ಚಿಂತೆ ಬೇಡ.

ಕನ್ಯಾ: ಈ  ರಾಶಿಯವರು ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವರು. ವ್ಯಾಪಾರಿಗಳಿಗೆ ಹಿತ, ಶತ್ರುಗಳ ಕಾಟ ಕಂಡುಬಂದೀತು. ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ಈ ರಾಶಿಯವರು ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಎದುರಾದೀತು. ಹೊಸ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಈ ರಾಶಿಯವರು ವಾಸ್ತವ ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುವುದು. ಸಂಗಾತಿಯ ಮಾತುಗಳು ಹಿತವೆನಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಧನಸ್ಸು: ಈ ರಾಶಿಯವರಿಗೆ ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಭೂಮಿ, ವಾಹನ ಖರೀದಿಯಲ್ಲಿ ಲಾಭವಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಮಕರ: ಈ ರಾಶಿಯವರು ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಸಂತೋಷ ಸಿಗುವುದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.

ಕುಂಭ: ಈ ರಾಶಿಯವರು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡುಬರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಈ ರಾಶಿಯವರು ಬಹುದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಸಂತೋಷಕ್ಕಾಗಿ ಪ್ರಯಾಣ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದಶಮಿ 

ನಕ್ಷತ್ರ:  ಪೂವಾ೯ಭಾದ್ರ ನಕ್ಷತ್ರ

ರಾಹುಕಾಲ: 04:29 ರಿಂದ 05:55

ಗುಳಿಕಕಾಲ: 03:02 ರಿಂದ 04:29

ಯಮಗಂಡಕಾಲ: 12:08 ರಿಂದ 01:35

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version