ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮ ಒಂದರಲ್ಲಿ ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಾದಬ್ರಹ್ಮ ಹಂಸಲೇಖ ಅವರು ಕ್ಷಮೆ ಕ್ಷೇಳಿದ್ದಾರೆ.
ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಆ ವೇಳೆ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಅಂತ ಹೇಳಿಕೆ ನೀಡಿದ್ದರು. ಇಷ್ಟೇ ಅಲ್ಲದೆ ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ತೀವ್ರ ಆಕ್ಷೇಪಕ್ಕೆ ಒಳಗಾಗಿತ್ತಲ್ಲದೆ ಕ್ಷಮೆ ಕೇಳುವಂತೆ ಹಲವರು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹಂಸಲೇಖ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. ಅಲ್ಲದೆ ಅವರು ಆಡಿದ ಮಾತುಗಳಿಗೆ ಮಡದಿ ಸಹ ವಿರೋಧಿ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……