Site icon ಹರಿತಲೇಖನಿ

ನ್ಯಾಯಬೆಲೆ ಅಂಗಡಿ ಮಹಿಳೆಗೆ ಬ್ಲ್ಯಾಕ್​ಮೇಲ್ ಆರೋಪ: ಭೀಮ್ ಆರ್ಮಿ ಜಿಲ್ಲಾಧ್ಯಕ್ಷನ ಬಂಧನ

Channel Gowda
Hukukudi trust

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ಮಹಿಳೆಗೆ ಬ್ಲ್ಯಾಕ್​ಮೇಲ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಅವಿನಾಶ  ಎನ್ನುವವರನ್ನು ಬಂಧಿಸಲಾಗಿದೆ. 

Aravind, BLN Swamy, Lingapura

ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಆರೋಪಿ ಅವಿನಾಶ್​ನ ಬಂಧಿಸಿದ್ದಾರೆ. ಭೀಮ್ ಆರ್ಮಿ ಉಪಾಧ್ಯಕ್ಷ ಪ್ರದೀಪ್ ಪರಾರಿಯಾಗಿದ್ದಾರೆ.

ನ್ಯಾಯಬೆಲೆ ಅಂಗಡಿ ಮಹಿಳೆಗೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂಬ ದೂರಿನನ್ವಯ ಅರೆಸ್ಟ್ ಮಾಡಲಾಗಿದೆ. ನ್ಯಾಯ ಬೆಲೆ ಅಂಗಡಿ ನಡೆಸುತ್ತಿರುವ ಮಹಿಳೆಯೊಬ್ಬರಿಗೆ ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಕೇಳಿ ಬಂದಿತ್ತು.

Aravind, BLN Swamy, Lingapura

ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ ನ್ಯಾಯಬೆಲೆ ಅಂಗಡಿ ಮಹಿಳೆ ರಂಗಮ್ಮಗೆ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಮಹಿಳೆ ಗ್ರಾಹಕರಿಂದ ತಲಾ 10 ರೂಪಾಯಿ ಪಡೆದ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟು, 15,000 ರೂ. ಹಣ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಅವಿನಾಶ್ ಮತ್ತು ಪ್ರದೀಪ್ ವಿರುದ್ಧ ರಂಗಮ್ಮ ಬಡಾವಣೆ ಠಾಣೆಗೆ ದೂರು ನೀಡಿದ್ದರು. ಸದ್ಯ ಆರೋಪಿ ಅವಿನಾಶ್​​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version