ಬೆಂಗಳೂರು: ಇತ್ತೀಚೆಗೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಅಪ್ಪುಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪುರಸ್ಕಾರ ನೀಡುವುದಾಗಿ ಘೋಷಿಸಿದರು.
ಕರ್ನಾಟಕ ರಾಜ್ಯ ಕಂಡ ಅಪ್ರತಿಮ ಕಲಾವಿದರಲ್ಲಿ ಪುನೀತ್ ರಾಜ್ ಕುಮಾರ್ ಅವರು ಡಾ.ರಾಜ್ ಕುಮಾರ್ ಅವರ ಆದರ್ಶಗಳನ್ನು ಚಾಚೂ ತಪ್ಪದೆ ಪಾಲಿಸಿ ಎಲ್ಲರಿಗೂ ಅವರು ಸೂಜಿಗಲ್ಲಿನಂತೆ ಸೆಳೆಯುತ್ತಿದ್ದರು. ಸೂರ್ಯ ಚಂದ್ರ ಇರುವವರೆಗೂ ಪುನೀತ್ ರಾಜಕುಮಾರ್ ಅವರು ಚಿರಸ್ಥಾಯಿಯಾಗಿರುತ್ತಾರೆ ಕರ್ನಾಟಕ ರತ್ನವಾಗಿ ಮಿಂಚುತ್ತಿರುತ್ತಾರೆ. ಎಲ್ಲರ ಹೃದಯದಲ್ಲೂ ಅವರು ನೆಲೆಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ ಕುಮಾರ್ ಕುಟುಂಬ, ಚಿತ್ರರಂಗದ ಆಹ್ವಾನಿತ ಗಣ್ಯರು, ರಾಜಕೀಯ ಮುಖಂಡರು ಭಾಗವಹಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……