Site icon ಹರಿತಲೇಖನಿ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 23 ಕೊನೆಯ ದಿನ: ಕೆ.ಶ್ರೀನಿವಾಸ್

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರಜೆ  ದಿನಗಳನ್ನು ಹೊರತುಪಡಿಸಿ, 2021ರ ನವೆಂಬರ್ 16 ರಿಂದ ನವೆಂಬರ್ 23ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

Aravind, BLN Swamy, Lingapura

ನಾಮಪತ್ರ ಸಲ್ಲಿಕೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದ್ದು, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಅಧಿಕಾರಿ ಅಥವಾ ಸಹಾಯಕ ಚುನಾವಣಾ ಅಧಿಕಾರಿಯವರಿಗೆ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. 

2021ರ ನವೆಂಬರ್ 24ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಹಾಗೂ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು 2021ರ ನವೆಂಬರ್ 26ರ ಮಧ್ಯಾಹ್ನ 3 ಗಂಟೆ ಕೊನೆಯ ದಿನವಾಗಿದೆ.

Aravind, BLN Swamy, Lingapura

2021ರ ಡಿಸೆಂಬರ್ 10ರ ಬೆಳಿಗ್ಗೆ 8 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version