ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ-17 ರಿಂದ ರಾಜ್ಯ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು, ನಾಲ್ಕನೇ ದಿನವಾದ ಇಂದು(19-11-2021) ಎರಡು ನಾಮಪತ್ರ ಸಲ್ಲಿಕೆಯಾಗಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಎಸ್.ರವಿ ಹಾಗೂ ಜನತಾದಳ(ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ರಮೇಶ್‌ಗೌಡ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
2021ರ ನವೆಂಬರ್ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಹಾಗೂ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 26 ಕೊನೆಯ ದಿನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ