ದೊಡ್ಡಬಳ್ಳಾಪುರ: ತಾಲೂಕಿನ ಕತ್ತಿಹೊಸಹಳ್ಳಿ ಬಳಿ ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕತ್ತಿ ಹೊಸಹಳ್ಳಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ NH 207ರಲ್ಲಿ ಬೆಳಿಗ್ಗೆ 8.30 ಗಂಟೆಗೆ ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ರಸ್ತೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರರಾದ ದಂಪತಿಗಳಿಬ್ಬರೂ ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತರನ್ನು ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ (65ವರ್ಷ), ಶಾರದಾ ನಾಯಕ್ (58ವರ್ಷ) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ನಾಗರಾಜ್, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ ಇನ್ಸ್‌ಪೆಕ್ಟರ್ ಗಜೇಂದ್ರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……