Site icon ಹರಿತಲೇಖನಿ

ನೊಂದ ಮಹಿಳೆಯರಿಗೆ ‘ಸಖಿ’ ಸಾಂತ್ವನ ಕೇಂದ್ರದಲ್ಲಿ ಹಲವು ಸೌಲಭ್ಯ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ‘ಸಖಿ’ ಸೂರಿನಡಿ ಹಲವು ಸೌಲಭ್ಯಗಳನ್ನು ಒದಗಿಸುವುದು ಪ್ರಮುಖ ಉದ್ದೇಶವಾಗಿದ್ದು, ನೊಂದ ಮಹಿಳೆಯರು ಈ ಯೋಜನೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

Aravind, BLN Swamy, Lingapura

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ನಡೆದ  2021-22ನೇ ಸಾಲಿನ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006, ಬಾಲ್ಯ ವಿವಾಹ ನಿಷೇದ ಕಾಯ್ದೆ ಕುರಿತ ಸಮನ್ವಯ ಸಮಿತಿ, ಸಖಿ ಯೋಜನೆಯ ಟಾಸ್ಕ್‍ಫೆÇೀರ್ಸ್ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. 

ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ಸಮಾಲೋಚನೆ ಹಾಗೂ ಪೆÇಲೀಸ್ ನೆರವು ನೀಡಿ, ಅವಶ್ಯಕವಾಗಿ ತಾತ್ಕಾಲಿಕ ವಸತಿ ಕಲ್ಪಿಸುವುದರ ಮೂಲಕ ಆಶ್ರಯ ನೀಡುವ ಆಶಯವಾಗಿದೆ ಎಂದು ತಿಳಿಸಿದರು.

Aravind, BLN Swamy, Lingapura

ನೊಂದ ಮಹಿಳೆಯರಿಗೆ ಮೊದಲಿಗೆ ಆಪ್ತಸಮಾಲೋಚನೆ ನಡೆಸುವ ಮೂಲಕ ಎಲ್ಲಾ ರೀತಿಯ ಸಹಾಯ ಹಾಗೂ ಬೆಂಬಲವನ್ನು ಒದಗಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಜೊತೆಗೆ ‘ಸಖಿ’ ಸೂರಿನಡಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಕೌಟುಂಬಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳವನ್ನು ತಡೆಗಟ್ಟಬೇಕು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಒಟ್ಟು 38 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 31 ಪ್ರಕಣಗಳನ್ನು ತಡೆಹಿಡಿಯಲಾಗಿದೆ. 6 ಪ್ರಕರಣಗಳಲ್ಲಿ ಎಫ್.ಐ.ಆರ್. ದಾಖಲಾಗಿದ್ದು, ಬಾಲ್ಯ ವಿವಾಹ ನಡೆದಿದ್ದಲ್ಲಿ ತಕ್ಷಣವೇ ಅವರ ವಿರುದ್ಧ ಎಫ್.ಐ.ಆರ್. ದಾಖಲಿಸಬೇಕು ಹಾಗೂ ಚೈಲ್ಡ್ ಲೈನ್ ಪ್ರಾರಂಭಿಸಿ ಪ್ರಚಾರ ನೀಡಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು. 

ಅಂಗನವಾಡಿ ಕೇಂದ್ರಗಳಲ್ಲಿ ಮುಖ್ಯವಾಗಿ ನೀರಿನ ಸೌಲಭ್ಯ ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇರುವ ಕಡೆ ತ್ವರಿತವಾಗಿ ಒದಗಿಸಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದರೆ ಆರೋಗ್ಯ ತಪಾಸಣೆ ನಡೆಸಿ ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಔಷಧಿಗಳನ್ನು ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್.ಎಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಸಾರ್ವಜನಿಕ  ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಲೀಡ್ ಬ್ಯಾಂಕ್‍ನ ವ್ಯವಸ್ಥಾಪಕ ಮಧುಸೂದನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಮೂಲಕ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version