Site icon ಹರಿತಲೇಖನಿ

ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ ಪರಿಹಾರ: ಬಸವರಾಜ್ ಬೊಮ್ಮಾಯಿ

Channel Gowda
Hukukudi trust

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ತಕ್ಷಣವೇ 1 ಲಕ್ಷ ರೂ. ಬಿಡುಗಡೆ ಮಾಡಲು ಸೂಚಿಸಿದ್ದೇವೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Aravind, BLN Swamy, Lingapura

ಬೆಳೆ ಸಮೀಕ್ಷೆ ಪರಿಹಾರ ಆಯಪ್​ನಲ್ಲಿ ಎಂಟ್ರಿಯಾಗಬೇಕು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ. ರಾಜ್ಯದಲ್ಲಿ ಡಿಸಿಗಳ ಖಾತೆಯಲ್ಲಿ 689 ಕೋಟಿ ರೂ. ಇದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ.

Aravind, BLN Swamy, Lingapura

ಕೃಷಿ, ಕಂದಾಯ, ತೋಟಗಾರಿಕೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಸಿಎಂ, ಬೆಳೆ ನಷ್ಟ ಪರಿಹಾರ ವಿತರಣೆಯೂ ತ್ವರಿತವಾಗಿ ಆಗಬೇಕು. 15ರಿಂದ 20 ದಿನ ಬೆಳೆ ಹಾನಿ ಸಮೀಕ್ಷೆ ನಡೆಸಲು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version