Site icon ಹರಿತಲೇಖನಿ

ಮಳೆ ಹಾನಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ

Channel Gowda
Hukukudi trust

ಬೆಂಗಳೂರು: ರಾಜ್ಯದ ಹಲವು ಭಾಗಗಳು ವರಣನ ಆರ್ಭಟಕ್ಕೆ ತತ್ತರಿಸಿದ್ದು, ಸಧ್ಯ ಮಳೆಯಿಂದ ಭಾರಿ ಹಾನಿಯಾಗಿದ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.

Aravind, BLN Swamy, Lingapura

ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಅವರು, ‘ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ.ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ’ ಎಂದರು. ಅದರಂತೆ, ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ ರೂಪಾಯಿ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇನ್ನು ಪ್ರವಾಹ ಪೀಡಿತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಬಿಡುಗಡೆ ಆಗಿದ್ದು, ರಾಜ್ಯದ 16 ಜಿಲ್ಲೆಗಳಿಗೆ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ.

Aravind, BLN Swamy, Lingapura

ಜುಲೈ, ಆಗಸ್ಟ್‌ನಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಸರ್ಕಾರ ಈ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದ್ದು, ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಅಡಿಯಲ್ಲಿ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version