ದೊಡ್ಡಬಳ್ಳಾಪುರ: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಂಎಸ್‌ಜಿಪಿಯನ್ನು ಮುಚ್ಚುವಂತೆ ಒತ್ತಾಯಿಸಿ ನವೆಂಬರ್ 24ರಿಂದ ನವ ಬೆಂಗಳೂರು ಹೋರಾಟ ಸಮಿತಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಾಯಿತಿ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದೆ.
ತಾಲೂಕಿನ ದೊಡ್ಡಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಭಕ್ತರಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಈ ತ್ಯಾಜ್ಯ ವಿಲೇವಾರಿ ಘಟಕದಿಂದ ತೀವ್ರ ತೊಂದರೆಗೆ ಒಳಗಾಗಿರುವುದಲ್ಲದೆ. ವಿಷಕಾರಿ ತ್ಯಾಜ್ಯ ನೀರು ಅಂತರ್ ಜಲಕ್ಕೆ ಮಾರಕವಾಗಿದೆ ಎಂಬುದು ಈ ವ್ಯಾಪ್ತಿಯ ಜನರ ಆರೋಪವಾಗಿದೆ.
ಈ ನಿಟ್ಟಿನಲ್ಲಿ ಎಂಎಸ್‌ಜಿಪಿ ಘಟಕ ಮುಚ್ಚುವಂತೆ ಆಗ್ರಹಿಸಿ ನವ ಬೆಂಗಳೂರು ಹೋರಾಟ ಸಮಿತಿ ಮತ್ತು ಭಕ್ತರಹಳ್ಳಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರ – ದಾಬಸ್‌ಪೇಟೆ ಹೆದ್ದಾರಿ ನಡುವಿನ ಮೂಗೇನಹಳ್ಳಿ ಕ್ರಾಸ್ ಬಳಿ ನ.24ರ ಬೆಳಿಗ್ಗೆ ಹತ್ತು ಗಂಟೆಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದು ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್(ಸಾರಥಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……