Site icon ಹರಿತಲೇಖನಿ

ದೊಡ್ಡಬಳ್ಳಾಪುರ: ಕಸಬಾ ಹೋಬಳಿ ಆರ್ ಐ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ…!

Channel Gowda
Hukukudi trust

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 68 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಪರಿಶೀಲನೆ ಮಾಡುತ್ತಿದ್ದಾರೆ.

Aravind, BLN Swamy, Lingapura

ಬುಧವಾರ ಬೆಳ್ಳಂಬೆಳಗ್ಗೆ 8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ಸಿಬ್ಬಂದಿಯ ತಂಡದಿಂದ 15 ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ 60 ಸ್ಥಳಗಳಲ್ಲಿ ಎಸಿಬಿ ಶೋಧ ನಡೆಸಿದೆ.

ಬೆಂಗಳೂರು ನಗರದಲ್ಲಿ ಬೆಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿಗೆ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Aravind, BLN Swamy, Lingapura

ಉಳಿದಂತೆ ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಎನ್. ಲಕ್ಷ್ಮೀನರಸಿಂಹಯ್ಯ, ಬೆಂಗಳೂರಿನ ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್,  ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ. ಮಸ್ತಿ ತಂಡದಿಂದ ದಾಳಿ ನಡೆದಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version