Site icon ಹರಿತಲೇಖನಿ

ಕುಚ್ಚಪ್ಪನಪೇಟೆ ಅಂಗನವಾಡಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ವೇಷ ಭೂಷಣ ಸ್ಪರ್ಧೆ

Channel Gowda
Hukukudi trust

ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಕುಚ್ಚಪ್ಪನಪೇಟೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.

Aravind, BLN Swamy, Lingapura

ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿತಾಲಕ್ಷ್ಮೀ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳು ಮತ್ತೆ ಆರಂಭವಾಗಿವೆ.ಮಹಾಮಾರಿ ಕೋವಿಡ್ ಸೋಂಕು ಪ್ರಾಣಹಾನಿ ಮಾಡುವುದರ ಜೊತೆಗೆ ಮಕ್ಕಳ ಶೈಕ್ಷಣಿಕ ಜೀವನದ ಮೇಲೆ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಪ್ರಾರಂಭಿಕ ಶಿಕ್ಷಣ ಹಾಗೂ ನೀಡಿ ಭವಿಷ್ಯದ ಉತ್ತಮ ನಾಗರಿಕರನ್ನಾಗಿ ಮಾಡುವ ಮಹತ್ವದ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಕೆ.ಎಸ್.ಪ್ರಭಾ, ಅಂಗನವಾಡಿ ಮೇಲ್ವಿಚಾರಕಿ ಚೈತ್ರ ಆರ್.ರಾವ್ ಆರೋಗ್ಯಾಧಿಕಾರಿ ಡಾ.ಸುರುಚಿ, ಪೋಷಣ್ ಅಭಿಯಾನದ ಸಂಯೋಜಕ ಲೋಕೇಶ್, ಮುಖಂಡರಾದ ಅನಂತಲಕ್ಷ್ಮೀ, ಎಸ್.ನವೀನ್, ಜನಾರ್ಧನ್, ಅಂಗನವಾಡಿ ಕಾರ್ಯಕರ್ತೆ ಬಿ.ಸಿ.ಶೋಭಾ, ಅಂಗನವಾಡಿ ಸಹಾಯಕಿ ಕೆ.ಎಸ್.ಪುಷ್ಪಲತಾ ಮತ್ತಿತರರಿದ್ದರು.

Aravind, BLN Swamy, Lingapura

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version