ದೊಡ್ಡಬಳ್ಳಾಪುರ: ನಗರದ ದೇವರಾಜನಗರದಲ್ಲಿರುವ ಭಗವಾನ್ ಸತ್ಯಸಾಯಿ ಸೇವಾ ಸಮಿತಿ ವತಿಯಿಂದ ಸಾಯಿಬಾಬಾ ಅವರ 96ನೇ ಹುಟ್ಟುಹಬ್ಬವನ್ನು ಶ್ರದ್ಧಾಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಘಾಟಿ ಕ್ಷೇತ್ರದಲ್ಲಿನ ರಾಷ್ಟ್ರೋತ್ತಾನ ಗೋಶಾಲೆಯ ಗೋವುಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು. ನಂತರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಂಚಾಲಕರಾದ ಎಸ್.ಎಲ್.ರಾಮಚಂದ್ರ, ಸಮಾಜ ಸೇವೆ ಹಾಗೂ ಆದ್ಯಾತ್ಮಕತೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಸಾಯಿಬಾಬಾ ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಸೇವಾ ಸಮಿತಿ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕುರಿತಂತೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಸಂಜೆ ಮಂದಿರದಲ್ಲಿ ಶ್ರೀ ಸಾಯಿ ದೀಪಾರಾಧನೆಯೊಂದಿಗೆ ಸತ್ಯನಾರಾಯಣಸ್ವಾಮಿ ಪೂಜೆ ನಡೆಯಿತು.
ಸೇವಾ ಸಮಿತಿಯ ಎಂ.ಕೆ.ವಿಶ್ವನಾಥ, ಬಿ.ಕೆ. ಬಾಲರಾಜು, ಬಿ.ಜೆ.ದೀಪಕ್ ಹಾಗೂ ಗೋಶಾಲೆಯ ಎಸ್.ಆರ್.ರಾಮಚಂದ್ರಪ್ಪ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……