ದೊಡ್ಡಬಳ್ಳಾಪುರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಮಾಸಿಕ ಪುಣ್ಯ ಸ್ಮರಣೆ ಅಂಗವಾಗಿ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಚಲನಚಿತ್ರ ಸಂಜೆ 4 ಗಂಟೆಗೆ ರಾಜ್‍ಕಮಲ್ ಚಿತ್ರಮಂದಿರದಲ್ಲಿ ಹಾಗೂ ಸಂಜೆ 7 ಕ್ಕೆ ಸೌಂದರ್ಯಮಹಲ್ ಚಿತ್ರಮಂದಿರದಲ್ಲಿ ಉಚಿತವಾಗಿ ಪ್ರದರ್ಶಿತವಾಗಲಿದೆ.
ಪುನೀತ್ ರಾಜ್‍ಕುಮಾರ್ ಅವರ ಸ್ಮರಣೆಗಾಗಿ ಉಚಿತ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಸೌಂದರ್ಯಮಹಲ್ ಚಿತ್ರಮಂದಿರದ ಮಾಲೀಕರಾದ ಟಿ.ವಸಂತ್ ಕುಮಾರ್ ಹಾಗೂ ರಾಜ್‍ಕಮಲ್ ಚಿತ್ರಮಂದಿರದ ಮಾಲೀಕರಾದ ಕೆ.ಸಿ.ಎನ್.ರುದ್ರೇಗೌಡ ಅವರಿಗೆ ತಾಲೂಕು ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ಪರವಾಗಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ರಮೇಶ್ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….