ಬೆಂಗಳೂರು: ಲಾಕ್ ಡೌನ್ ನಿಂದ ಈಗಾಗಲೇ ಅನುಭವಿಸಿರುವ ಜನರು ಸಾಕಷ್ಟು ನೊಂದಿದ್ದಾರೆ. ಹೀಗಾಗಿ ಮತ್ತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದಾಗಿ ಅನಾರೋಗ್ಯ ಸಮಸ್ಯೆ, ಲಾಕ್ ಡೌನ್ ನಿಂದ ಆರ್ಥಿಕವಾಗಿ ಈಗಾಗಲೇ ಜನರು ಬಹಳಷ್ಟು ನೊಂದಿದ್ದಾರೆ. ಬಹಳ ನಷ್ಟ ಅನುಭವಿಸಿದ್ದಾರೆ. ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ, ಹೀಗಾಗಿ ಮತ್ತೆ ಮತ್ತೆ ಆತಂಕ, ಸಮಸ್ಯೆ ಸೃಷ್ಟಿ ಮಾಡುವ ಕೆಲಸ ಮಾಡುವುದಿಲ್ಲ, ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದರು.
ಲಾಕ್ ಡೌನ್ ಬಗ್ಗೆ ಸುಳ್ಳುಸುದ್ದಿ ಹಬ್ಬುತ್ತಿದೆ. ಹೀಗೆ ಲಾಕ್ ಡೌನ್ ನ ಸುಳ್ಳು ಸುದ್ದಿ ಹಬ್ಬಿಸಿ ಜನರಲ್ಲಿ ಭಯ, ಆತಂಕ ಸೃಷ್ಟಿಸುವುದು ಬೇಡ, ಮಾಧ್ಯಮಗಳು ಗೊಂದಲಮಯ ಸುದ್ದಿ ಹಾಕುವುದು ಬೇಡ ಎಂದಿದ್ದಾರೆ.
ಕೋವಿಡ್ ರೂಪಾಂತರಿ ಹೊಸ ತಳಿ ಬರುತ್ತಿದೆ, ಇದು ಬಹಳ ವೇಗವಾಗಿ ಸಮುದಾಯದಲ್ಲಿ ಹರಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ಸರಿಯಾದ ಎಚ್ಚರಿಕೆ ಸುದ್ದಿ ನೀಡುತ್ತಿದ್ದೀರಿ. ಅದು ಮುಂದುವರಿಯಲಿ, ಆದರೆ ಲಾಕ್ ಡೌನ್ ನಂತಹ ಆತಂಕಗೊಳಿಸುವ ಸುದ್ದಿ ಬೇಡ ಎಂದು ಮನವಿ ಮಾಡಿಕೊಂಡರು
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….