Site icon ಹರಿತಲೇಖನಿ

ಉಚಿತ ಆಹಾರ ದಾನ್ಯ ವಿತರಣೆ ಮಾರ್ಚ್ ವರೆಗೆ ವಿಸ್ತರಣೆ: ಪ್ರಧಾನಿ ನರೇಂದ್ರ ಮೋದಿ

Channel Gowda
Hukukudi trust

ನವದೆಹಲಿ: ಹೊಸ ಕರೊನಾ ವೈರಸ್ ರೂಪಾಂತರದ ಓಮಿಕ್ರಾನ್ ವಿರುದ್ಧ ಜಾಗರೂಕರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಜನರಲ್ಲಿ ಮನವಿ ಮಾಡಿದ್ದಾರೆ. 

Aravind, BLN Swamy, Lingapura

ದಕ್ಷಿಣ ಆಫ್ರಿಕಾದ ದೇಶಗಳಲ್ಲಿ ಗುರುತಿಸಲ್ಪಟ್ಟಿರುವುದರಿಂದ, ಓಮಿಕ್ರಾನ್ ವೇಗವಾಗಿ ಹರಡುತ್ತಿದೆ ಮತ್ತು ಪ್ರಬಲವಾದ ತಳಿಯಾದ ಡೆಲ್ಟಾಕ್ಕಿಂತ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ.

ಸಾಂಕ್ರಾಮಿಕ ರೋಗದ ಸವಾಲಿನ ಸಮಯದಲ್ಲಿ ನಾವು 100 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳನ್ನು ನೀಡಿದ್ದೇವೆ. ಈಗ ನಾವು 150 ಕೋಟಿ ಡೋಸ್‌ಗಳತ್ತ ಸಾಗುತ್ತಿದ್ದೇವೆ. ಹೊಸ ಕರೊನಾ‌ ವೈರಸ್ ರೂಪಾಂತರದ ಹೊರಹೊಮ್ಮುವಿಕೆಯ ಸುದ್ದಿ ನಮ್ಮನ್ನು ಹೆಚ್ಚು ಜಾಗೃತಗೊಳಿಸುತ್ತದೆ. ನಾವೆಲ್ಲರೂ ಎಚ್ಚರದಿಂದಿರಬೇಕು ಎಂದು ಪ್ರಧಾನಿ ಮೋದಿ ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದ ಮೊದಲು ತಮ್ಮ ಭಾಷಣದಲ್ಲಿ ಹೇಳಿದರು.

Aravind, BLN Swamy, Lingapura

ದೇಶದ ಜನರ ಉತ್ತಮ ಆರೋಗ್ಯವೇ ಸರ್ಕಾರದ ಆದ್ಯತೆಯಾಗಿದೆ ಎಂದರು.ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಮಾರ್ಚ್ 2022 ರವರೆಗೆ ವಿಸ್ತರಿಸುವುದಾಗಿಯೂ ಘೋಷಿಸಿದರು. 

ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಧಾನ್ಯಗಳನ್ನು ಒದಗಿಸಲು ನಾವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನಡೆಸುತ್ತಿದ್ದೇವೆ. ಇದರಿಂದ ಅವರು ಹೆಚ್ಚಿನ ಆಹಾರ ಸಮಸ್ಯೆಗಳನ್ನು ಎದುರಿಸುವುದಿಲ್ಲ.

ಯೋಜನೆಯನ್ನು ಈಗ ಮಾರ್ಚ್ 2022 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಸುಮಾರು ರೂ 2,60,000 ಕೋಟಿ ವ್ಯಯವಾಗಲಿದ್ದು, ಈ ಯೋಜನೆಯು 80 ಕೋಟಿಗೂ ಹೆಚ್ಚು ಜನರಿಗೆ ಆಹಾರದ ಭರವಸೆ ನೀಡುತ್ತದೆ ಎಂದು ಪ್ರಧಾನಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಹೇಳಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version