ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಇತರೆ ಪದಾಧಿಕಾರಿಗಳ ಸ್ಥಾನಕ್ಕೆ ಭಾನುವಾರ ನಗರದ ಬಸವ ಭವನದಲ್ಲಿ ನಡೆದ ಚುನಾವಣೆಯಲ್ಲಿ ಎಸ್.ನಂಜುಂಡಪ್ರಸಾದ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ವಲಯ ಉಪಾಧ್ಯಕ್ಷರಾಗಿ ರಾಧೇಶ್ ಜಂಬಗಿ, ಮೈಸೂರು ವಲಯ ಉಪಾಧ್ಯಕ್ಷರಾಗಿ ಟಿ.ಪಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿಯಾಗಿ ಮುಕುಂದ ಪೋತ್ನೀಸ್, ಖಜಾಂಚಿಯಾಗಿ ಸೋಮಲಿಂಗಪ್ಪ ಸೊಲಾರಗುಪ್ಪ,ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಕೆ.ಸಿ.ಆನಂದ್ ಆಯ್ಕೆಯಾಗಿದ್ದಾರೆ.
ಬೆಳಗಾವಿ ವಲಯ ಉಪಾಧ್ಯಕ್ಷರಾಗಿ ಪ್ರಶಾಂತ್ ವಿ.ಹಂಚಾಟೆ, ಕಲಬುರ್ಗಿ ವಲಯ ಉಪಾಧ್ಯಕ್ಷರಾಗಿ ಪ್ರಶಾಂತ್ ಚಿಟೆಗೇಪರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….