ದೊಡ್ಡಬಳ್ಳಾಪುರ: ಹೊಸ ತಳಿ ಓಮಿಕ್ರಾನ್ ಕುರಿತು ಸುಳ್ಳು ಸುದ್ದಿಗಳಿಗೆ ಆತಂಕಕ್ಕೆ ಒಳಗಾಗದೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸಂದೇಶ್ ತಿಳಿಸಿದರು.
ವೋಲ್ವೋ ಗ್ರೂಪ್ ಹಾಗೂ ಇಂಫೋಸಿಸ್ ನಾರಾಯಣ ಹೆಲ್ತ್ ಸಹಯೋಗದೊಂದಿಗೆ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚಾರಿ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಹೊಸ ತಳಿ ಕುರಿತು ಸಾರ್ವಜನಿಕರು ಅನವಶ್ಯಕವಾಗಿ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕೋವಿಡ್ ನಿಯಮ ಪಾಲನೆ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿ ಸೋಂಕಿನ ವಿರುದ್ಧ ಹೋರಾಟ ನಡೆಸಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಎರಡನೇ ಡೋಸ್ ಲಸಿಕೆ ಪಡೆಯದವರು ತ್ವರಿತವಾಗಿ ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.
ಈ ವೇಳೆ ಗ್ರಾಪಂ ಪಿಡಿಒ ರವೀಂದ್ರ, ಸದಸ್ಯರಾದ ಮೀನ, ಸುಷ್ಮ ಮತ್ತಿತರರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….