ಬೆಂಗಳೂರು: ಹೊಸ ತಳಿ ಓಮಿಕ್ರಾನ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡದಂತೆ ರಾಜ್ಯ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನದಂತೆ ಓಮಿಕ್ರಾನ್ ಸೋಂಕನ್ನು ತಡೆಗಟ್ಟಲು ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅವೆಲ್ಲವನ್ನು ತೆಗೆದುಕೊಂಡಿದ್ದೇವೆ ಯಾವುದೇ ಭಯ ಬೇಡ.ಸರ್ಕಾರ ಈಗಾಗಲೇ ಎಲ್ಲೆಲ್ಲಿ ಬಿಗಿ ಕ್ರಮಗಳನ್ನು ತೆಗೆದು ಕೊಂಡಿದೆ ಎಂದು ಅವರು ತಿಳಿಸಿದರು.
ವಿದೇಶದಿಂದ ಬಂದವರ ಮೇಲೆ ತೀವ್ರವಾದ ನಿಗಾ ಇಡಲಾಗಿದೆ. ಅವರನ್ನು ವಿಮಾನ ನಿಲ್ದಾಣದಲ್ಲೇ ಕೋವಿಡ್ ಟೆಸ್ಟ್‍ಗೆ ಒಳಪಡಿಸುವುದು, ಹೋಂ ಕ್ವಾರಂಟೈನ್, ಆರ್‍ಟಿಪಿಸಿಆರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಇನ್ನು 45 ಲಕ್ಷ ಮಂದಿ 2ನೇ ಕೋವಿಡ್ ಲಸಿಕೆ ಪಡೆದಿಲ್ಲ ಎಂಬ ಮಾಹಿತಿ ಇದೆ. ಅಂಥವರು ತಕ್ಷಣವೇ ಸ್ವಯಂಪ್ರೇರಿತರಾಗಿ ಬಂದು ಲಸಿಕೆಯನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಉದಾಸೀನ ತೋರಬಾರದು ಎಂದು ಮನವಿ ಮಾಡಿದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….