ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿಗೆ ವಿವಿಧ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದು, 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2ನೇ ಕಂತಿಗೆ ನವೀಕರಣ ಅರ್ಜಿಯನ್ನು ಸುವಿಧಾ ತಂತ್ರಾಂಶ http://Suvidha.karnataka.gov.in ದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸುವುದು. ಅರ್ಜಿದಾರರು ಆಧಾರ್‌ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಸ್ವಯಂ ಉದ್ಯೋಗ ಸಾಲ ಯೋಜನೆಯಡಿಯಲ್ಲಿ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಇದರ ಉಪಜಾತಿಗಳು ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯ, ಸಾಂಪ್ರದಾಯಿಕ ವೃತಿಗಳು ಹಾಗೂ ವೃತ್ತಿ ಕಸಬುದಾರರಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಾಲ ಮತ್ತು ಸಹಾಯಧನದ ನೆರವು ನೀಡಲಾಗುವುದು.
ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಜಿದಾರರು ಕೈಗೊಳ್ಳುವ ವ್ಯಾಪಾರ, ಕೃಷಿ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳು, ಸೇವಾ ಉದ್ದಿಮೆಗಳು, ತಾಂತ್ರಿಕ ಉದ್ದಿಮೆಗಳು ಮತ್ತು ಸಾರಿಗೆ ವಲಯದಲ್ಲಿ ಕೈಗೊಳ್ಳುವ ಆರ್ಥಿಕ ಚಟುವಟಿಕೆ ಅನುಸಾರ ಸಾಲ ಪಡೆಯಬಹುದು.
ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆಯಡಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವ ಸಹಾಯ ಗುಂಪುಗಳ ಮೂಲಕ ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಹಾಗೂ ಸಹಾಯಧನವನ್ನು ಒದಗಿಸಲಾಗುವುದು.
ಆಸಕ್ತರು ಅರ್ಜಿ ನಮೂನೆಗಳನ್ನು ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಹಾಗೂ ನಿಗಮದ ವೆಬ್‌ಸೈಟ್ https://kaad.karnataka.gov.in ಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವುದು.
ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 2022ರ ಜನವರಿ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿ, ಯೋಜನೆಗಳ ವಿವರಗಳಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 080-29605761 ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….