![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಪಶು ಚಿಕಿತ್ಸಾಲಯ ಬಾಶೆಟ್ಟಿಹಳ್ಳಿ ರವರುಗಳ ಸಹಯೋಗದಲ್ಲಿ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಕೆ.ಕುಸುಮ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು ಕಾಲು ಬಾಯಿ ರೋಗವು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರಿಂದ, ಕಾಲು ಬಾಯಿ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆಯನ್ನು ಹಾಕುವುದರಿಂದ ಕಾಲು ಬಾಯಿ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದರು. ರೋಗ ಗ್ರಸ್ತ ರಾಸುಗಳು ಏನಾದರೂ ಇದ್ದಲ್ಲಿ ಕೂಡಲೇ ಪಶುವೈದ್ಯರಿಗೆ ತೋರಿಸಬೇಕು ಎಂದು ಗ್ರಾಮದ ರೈತರಿಗೆ ಸಲಹೆ ನೀಡಿದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ.ಎಂ.ಚಿಕ್ಕಣ್ಣ ಮಾತನಾಡಿ, ರಾಸುಗಳ ಸೂಕ್ತ ಉಪಚಾರದ ಜೊತೆಯಲ್ಲಿ ಖನಿಜ ಮಿಶ್ರಣ, ಗೋಧಾರ್ ಶಕ್ತಿ, ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನು ತಪ್ಪಿಸಬಹುದು. ರೈತರು ಹಾಲನ್ನು ತರುವಾಗ ಶುದ್ಧವಾಗಿ ಶುಚಿಯಾಗಿ ತರಬೇಕು. ರೈತರು ರಾಸುಗಳಿಗೆ ಲಸಿಕೆ ಹಾಕಿಸಿಕೊಳ್ಳುವುದರಿಂದ ರಾಸುಗಳಲ್ಲಿನ ಹಾಲಿನ ಪ್ರಮಾಣ ಕಡಿಮೆ ಆಗುವುದಿಲ್ಲ, ಪ್ರತಿಯೊಂದು ರಾಸುವಿಗೂ ಲಸಿಕೆ ಹಾಕಿಸಿಕೊಳ್ಳಿ ಎಂದರು.
ಲಸಿಕಾ ಅಭಿಯಾನದಲ್ಲಿ ಗ್ರಾಮದ ರೈತರಿಗೆ ತಿಳುವಳಿಕೆ ನೀಡುವ ಮೂಲಕ ಗ್ರಾಮದ ಎಲ್ಲಾ ರಾಸುಗಳಿಗೂ ಲಸಿಕೆಯನ್ನು ಹಾಕಲಾಯಿತು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಮುನಿಕೃಷ್ಣ, ಬಾಶೆಟ್ಟಿಹಳ್ಳಿ ಪ್ರಾಥಮಿಕ ಪಶು ಚಿಕಿತ್ಸಾಲಯದ ವತಿಯಿಂದ ಡಾ.ರಾಜೇಶ್ ತಂಡ, ಕೆ.ಎಂ.ಎಫ್ ಸಿಬ್ಬಂದಿ ನಾಗೇಶ್, ಹಾಲು ಪರೀಕ್ಷಕ ಶರಣ್ ರಾಜ್, ನಿರ್ದೇಶಕರಾದ ಹನುಮಂತಗೌಡ, ವೆಂಕಟಲಕ್ಷ್ಮಮ್ಮ, ವೆಂಕಟಮ್ಮ, ಸದಸ್ಯರು, ರೈತರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….