ಹೈದರಾಬಾದ್: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ (88ವರ್ಷ) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ರೋಸಯ್ಯ ಅವರನ್ನು ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಹೈದರಾಬಾದ್ ನಲ್ಲಿ ನೆರವೇರಲಿದೆ.
ರೋಸಯ್ಯ ಅವರ ನಿಧನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….