ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿಗೆ ವಿವಿಧ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಡಿಯಲ್ಲಿ ಬರುವ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದು, 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮುಂದುವರೆದ ಕಂತುಗಳಿಗೆ(2, 3, 4 ಮತ್ತು 5ನೇ ಕಂತುಗಳು) ನವೀಕರಣ ಅರ್ಜಿಯನ್ನು ಸುವಿಧಾ ಆನ್‍ಲೈನ್ ಪೋರ್ಟಲ್ ಮುಖಾಂತರ https://suvidha.karnataka.gov.in ಸಲ್ಲಿಸುವುದು.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿ ಅಥವಾ ನಿಗಮದ ವೆಬ್‍ಸೈಟ್ https://kvcdcl.karnataka.gov.in ನಲ್ಲಿ ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಸಲ್ಲಿಸುವುದು.
ಸಲ್ಲಿಸಬೇಕಾದ ದಾಖಲೆಗಳ ಕುರಿತು ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್‍ಸೈಟ್ https://dbcdc.karnataka.gov.in ಇಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು 2022ರ ಜನವರಿ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಮತ್ತು ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….