ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ 2021ರ ನವೆಂಬರ್ ಮಾಹೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಕಟಾವಿಗೆ ಬಂದಿದ್ದ ವಿವಿಧ ಬೆಳೆಗಳಲ್ಲಿ ಸಂಭವಿಸಿದ ಬೆಳೆ ಹಾನಿ ವಿವರವನ್ನು ಕಂದಾಯ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಜಂಟಿ ಸಮೀಕ್ಷೆಯೊಂದಿಗೆ ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಿ ರೈತರ ಖಾತೆಗೆ ರೂ.94.96 ಲಕ್ಷಗಳ ಪರಿಹಾರ ನೀಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2021ರ ಡಿಸೆಂಬರ್ 02ರವರೆಗೆ ಜಿಲ್ಲೆಯ 2541 ಪಲಾನುಭವಿ ರೈತರ ಖಾತೆಗೆ ರೂ. 94.96 ಲಕ್ಷಗಳ ಪರಿಹಾರವನ್ನು ಸರ್ಕಾರ ನೇರ ಹಣ ವರ್ಗಾವಣೆ ಮೂಲಕ ಪಾವತಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….