Site icon ಹರಿತಲೇಖನಿ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಲು ಚುನಾವಣಾ ವೀಕ್ಷಕ ಶಿವಯೋಗಿ ಸಿ ಕಳಸದ್ ಸೂಚನೆ

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಕೆಲಸಗಳಲ್ಲಿ ಯಾವುದೇ ಲೋಪವಾಗದಂತೆ ನಡೆಯಬೇಕು ಎಂದು ಚುನಾವಣಾ ವೀಕ್ಷಕರಾದ ಶಿವಯೋಗಿ ಸಿ ಕಳಸದ್ ಅವರು ತಿಳಿಸಿದರು.

Aravind, BLN Swamy, Lingapura

ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣೆ ಸಿದ್ಧತೆಯ ಸಂಬಂಧ ಇಂದು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚುನಾವಣೆಯಲ್ಲಿ ಮತದಾರರ ಸಂಖ್ಯೆ ಹಾಗೂ ಮತಗಟ್ಟೆಗಳ ಸಂಖ್ಯೆ ಕಡಿಮೆ ಇದೆ ಎಂದು ಮೈಮರೆಯುವಂತಿಲ್ಲ. ಚುನಾವಣೆ ಕೆಲಸಕ್ಕೆ ನಿಯೋಜಿಸುವ ಪ್ರತಿಯೊಬ್ಬ ಸಿಬ್ಬಂದಿಯು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಮತದಾನವು ಡಿಸೆಂಬರ್ 10 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮತದಾನ ನಡೆಯುವ ಕೊಠಡಿಯಲ್ಲಿ ಮತದಾನದ ಗೌಪ್ಯತೆ ಕಾಪಾಡುವ ರೀತಿ ಎಚ್ಚರಿಕೆ ವಹಿಸಿ ವಿಡಿಯೋ ಚಿತ್ರೀಕರಣ ನಡೆಯಬೇಕು. ಇದಕ್ಕೆ ಬೇಕಿರುವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಮತದಾನದ ಸಂದರ್ಭದಲ್ಲಿ ಮತದಾನದ ಕೊಠಡಿಗೆ ಮತದಾರರು ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

Aravind, BLN Swamy, Lingapura

ಮತದಾನವು ಗ್ರಾಮ ಪಂಚಾಯಿತಿ ಕಚೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಯ ಕಚೇರಿಗಳಲ್ಲಿ ನಡೆಯುವ ಹಿನ್ನಲೆಯಲ್ಲಿ ಅಲ್ಲಿ ಮತದಾನದ ಕೆಲಸದ ಹೊರತು ಬೇರೆ ಕೆಲಸಗಳು ನಡೆಯದಂತೆ ಎಚ್ಚರಿಕೆ ವಹಿಸಿ ಎಂದರು.

ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೆಲಸಗಳು ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದ್ದು, ರೂಟ್ ಮ್ಯಾಪ್ ಮಾಡಿಕೊಂಡು ಬೇಕಿರುವ ವಾಹನದ ವ್ಯವಸ್ಥೆಗಳನ್ನು ಮಾಡಿಕೊಳ್ಳಿ ಎಂದ ವೀಕ್ಷಕರು ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ತರಬೇತಿ ನೀಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ರಾಮನಗರ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್.ಕೆ ಅವರು ಮಾತನಾಡಿ ರಾಮನಗರ ಜಿಲ್ಲೆಯಲ್ಲಿ 973 ಪುರುಷರು ಹಾಗೂ 1089 ಮಹಿಳೆಯರು ಸೇರಿ ಒಟ್ಟು 2062 ಮತದಾರರಿದ್ದು, 122 ಗ್ರಾಮ ಪಂಚಾಯತಿ ಹಾಗೂ 4 ನಗರ ಸ್ಥಳೀಯ ಸಂಸ್ಥೆಗಳು ಸೇರಿ ಒಟ್ಟು 126 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ 24 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಹಾಗೂ 48 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ ಎಂದರು.

ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಲಾ 145 ಪಿ.ಆರ್.ಒ, ಎ.ಪಿಆರ್.ಒ ಹಾಗೂ ಮೈಕ್ರೋ ವೀಕ್ಷಕರನ್ನು ನೇಮಕ ಮಾಡಿ ತರಬೇತಿ ನೀಡಲಾಗಿದೆ. ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಪ್ರತಿ ತಾಲ್ಲೂಕಿಗೆ ಎರಡು ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಸಭೆಯಲ್ಲಿ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version