ಬೆಂ.ಗ್ರಾ.ಜಿಲ್ಲೆ: ಅತಿವೃಷ್ಟಿ ಸಂಕಷ್ಟದ ಸಂದರ್ಭದಲ್ಲಿ ರಾಗಿ ಕಟಾವು ಮಾಡುವ ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2700 ಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಈ ದರಕ್ಕಿಂತ ಹೆಚ್ಚಿನ ದರ ಪಡೆದ್ದಲ್ಲಿ, ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 67,105 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯು ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು, ಕಟಾವು ಕಾರ್ಯ ಪ್ರಗತಿಯಲ್ಲಿದೆ.
ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (Combined Harvesters) ಮೂಲಕ ಕಟಾವು ಕಾರ್ಯ ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ರೂ. 3500 ರಿಂದ ರೂ. 4000 ಗಳವರೆಗೆ ಬಾಡಿಗೆ ಹಣ ನಿಗದಿಪಡಿಸಿರುವ ಬಗ್ಗೆ ರೈತರುಗಳಿಂದ ದೂರು ಬಂದಿದ್ದು, ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ.
ಆದುದರಿಂದ ರಾಗಿ ಕಟಾವು ಮಾಡುವ ಯಂತ್ರಕ್ಕೆ ಪ್ರತಿ ಗಂಟೆಗೆ ರೂ.2700 ಗಳು ಮೀರದಂತೆ ಬಾಡಿಗೆಯನ್ನು ಪಡೆಯುವ ಮೂಲಕ ಮಾಲೀಕರು ಸಹಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….