![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು: ಕೋವಿಡ್ ಸೋಂಕಿನ ಅಂತ್ಯದ ದಿನಗಳು ಆರಂಭವಾಗಿದೆ. ಆದರೂ ನಾವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಕೆಲ ದಿನಗಳಿಂದ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಹೀಗಾಗಿ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಈಗಾಗಲೇ 7 ಕೋಟಿ 80 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ ಎಂದು ತಿಳಿಸಿದಾರೆ.
ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ವೈರಸ್ ಹೊಸ ಪ್ರಭೇದವಾಗಿದ್ದು, ಇದರ ಬಗ್ಗೆ ಯಾರೂ ಉದಾಸೀನ ಮಾಡಬಾರದು. ಇದು ಹೊಸ ಪ್ರಭೇದವಾಗಿದ್ದು ತಕ್ಷಣಕ್ಕೆ ಗೊತ್ತಾಗಲ್ಲ ಅಧ್ಯಯನ ಬೇಕು. ಮೂರನೇ ಅಲೆಯಲ್ಲಿ ದೊಡ್ಡ ದುಷ್ಪರಿಣಾಮ ಯಾವುದು ಆಗೋದಿಲ್ಲ ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….