ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಆತಂಕ ಹಾಗೂ ಕರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ರಾಜ್ಯದಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಬಗ್ಗೆ ನಿರ್ಧರಿಸಿಲ್ಲ. ಒಂದು ವಾರದ ಬೆಳವಣಿಗೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.
ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆ ಬಗ್ಗೆಯೂ ಒಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….