![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ರಂತೆ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2021ರ ಡಿಸೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://www.bcwd.karnataka.gov.inಅನ್ನು ನೋಡಬಹುದು ಹಾಗೂ ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….