![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಈ ಕುರಿತು ಕೂ ಮಾಡಿರುವ ಅವರು, 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳ ಭರ್ತಿ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿ ಕುರಿತು ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುತ್ತದೆ.
ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….