ನವದೆಹಲಿ: ಶ್ರೀನಗರದ ಹೊರವಲಯದಲ್ಲಿ ಝೆವಾನ್ ಪೊಲೀಸ್ ಪ್ರಧಾನ ಕಚೇರಿ ಕಡೆಗೆ ಹೋಗುವ ರಸ್ತೆಯಲ್ಲಿ ಸಶಸ್ತ್ರ ಪೊಲೀಸ್ ಬಸ್ ಮೇಲೆ ಉಗ್ರರು ಗುಂಡಿನ ದಾಳಿಯಲ್ಲಿ ಮೂವರು ಯೋಧರು ಸಾವನ್ನಪ್ಪಿ 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶ್ರೀನಗರದ ಪಂಥಾ ಚೌಕ್ ಪ್ರದೇಶದ ಜೆವಾನ್ ಬಳಿ ಭಯೋತ್ಪಾದಕರು ಪೊಲೀಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 13 ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ ಎನ್ನಲಾಗಿದೆ.
ಘಟನಾ ಪ್ರದೇಶವನ್ನು ಭಾರತೀಯ ಸೇನೆ ಸುತ್ತುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….